ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೊರೋನಾ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (Modi Ka Parivar) (@BSBommai) August 6, 2022
ಸಿಎಂ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಅಜಾದಿ ಕಾ ಅಮೃತ್ ಮಹೋತ್ಸವ ಸಭೆಯಲ್ಲಿ ಭಾಗವಹಿಸಬೇಕಿತ್ತು. ಕೊರೋನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ.