ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ರೀತಿಯ ಸ್ಥಿತಿಯಿಂದಾಗಿ ಮುಂದಿನ ನಾಲ್ಕು ದಿನ ಕರಾವಳಿ ಕರ್ನಾಟಲದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರು ನದಿ ಮತ್ತು ಸಮುದ್ರದ ಪ್ರದೇಶಕ್ಕಿಳಿಯದಂತೆ ಸಲಹೆ ನೀಡಲಾಗಿದೆ.
ಸಮುದ್ರ ಕಿನಾರೆ ಪ್ರದೇಶಗಳಲ್ಲಿ ನಿಲ್ಲದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ನೀರು ನುಗ್ಗುವ ಪ್ರದೇಶಗಳಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಯವರಿಗೆ ಸೂಚಿಸಲಾಗಿದೆ.
ADVERTISEMENT
ADVERTISEMENT