ನಾಳೆಯವರೆಗೆ ಅಂದರೆ ಡಿಸೆಂಬರ್ 13ರವರೆಗೂ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗಲಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಳೆ ಮುಂದುವರೆಯಲಿದೆ.
ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲೂ ಭಾರೀ ಮಳೆಯ ಮುಂದುವರಿಕೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಇತ್ತ ಕೇರಳದಲ್ಲೂ ಮ್ಯಾಂಡಸ್ ಚಂಡಮಾರುತದ ಪರಿಣಾಮದಿಂದ ನಾಳೆವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.