ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿರುವ ನಟ ದರ್ಶನ್ ಅವರು ಇತ್ತೀಚೆಗೆ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸುದ್ದಿಯಾಗಿದ್ದರು.
ಸದ್ಯ ಈ ಪ್ರಕರಣದಲ್ಲಿ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ.
ಆರ್.ಆರ್ ನಗರ (RR Nagar) ಪೊಲೀಸರು ನಟ ದರ್ಶನ್ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದು, ಪ್ರಕರಣದಿಂದ ಅವರ ಹೆಸರನ್ನು ಕೈ ಬಿಟ್ಟಿದ್ದಾರೆ.
ದರ್ಶನ್ ಮನೆಯ ನಾಯಿ (dog) ಅಮಿತಾ ಜಿಂದಾಲ್ ಎಂಬವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು.
ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್ನಲ್ಲಿಭಾಗಿಯಾಗಿದ್ದರು. ದರ್ಶನ್ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಲು ನಿರ್ಧರಿಸಲಾಗಿದೆ.
ಆದರೆ, ನಾಯಿಯನ್ನು ಸಾಕಲು ನೇಮಿಸಿಕೊಂಡಿದ್ದ ಕೆಲಸಗಾರನನ್ನು ಆರೋಪಿಯಾಗಿ ಪೊಲೀಸರು ಗುರುತಿಸಿದ್ದಾರೆ.