ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಈಗಾಗಲೇ ದಿನಗೂಲಿ ಆಧಾರದ ಮೇಲೆ 2 ವರ್ಷಗಳ ಕಾಲ ಹುದ್ದೆ ನಿರ್ವಹಣೆ ಮಾಡಿದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ 119 ಪೌರ ಕಾರ್ಮಿಕ ಹುದ್ದೆಗೆ ಭರ್ತಿಗೆ ಕ್ರಮ.
ಅರ್ಹತೆ: ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿರಬೇಕು.
ವೇತನ: ಮಾಸಿಕ 17,000-28,950 ರೂ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿಯನ್ನು ಪಡೆದು, ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ವಿಳಾಸ: ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ರೈಲ್ವೆ ನಿಲ್ದಾಣ ಎದುರು, ಪಿಬಿ ರಸ್ತೆ, ದಾವಣಗೆರೆ.
ಈ ಹುದ್ದೆಗೆ ಡಿಸೆಂಬರ್ 12ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 20 ಆಗಿದೆ.
ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ davanagerecity.mcr.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.