2018 ರಲ್ಲಿ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಇತರರ ಮೇಲೆ ದೆಹಲಿ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಇತ್ತೀಚೆಗಷ್ಟೇ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ವಿರುದ್ಧ ಚಾರ್ಜ್ ಶಿಟ್ ಸಲ್ಲಿಕೆಯಾಗಿತ್ತು. ಈ ಚಾರ್ಜ್ ಶೀಟ್ ಆಧಾರದ ಮೇಲೆ ವಿಶೇಷ ಜಡ್ಸ್ ವಿಕಾಸ್ ದುಬೆ ಅವರು ಜುಲೈ 1 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಹಾಗೂ ಇತರರ ಮೇಲೆ ವಿಶೇಷ ಪಬ್ಲಿಕ್ ಪ್ರಸಿಕ್ಯೂಟರ್ ನಿತೀಶ್ ರಾಣಾ ಅವರ ಮೂಲಕ ಇಡಿ ಸಲ್ಲಿಸಿದ್ದ ಚಾರ್ಜ್ಶೀಟ್ನ ಆಧಾರದ ಮೇಲೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಇಡಿ ಸೆಪ್ಟಂಬರ್ 3, 2019 ರಂದು ಬಂಧಿಸಿತ್ತು. ಅನಂತರ ಅಕ್ಟೋಬರ್ 23, 2019 ರಲ್ಲಿ ದೆಹಲಿ ನ್ಯಾಯಾಲಯ ಇವರಿಗೆ ಜಾಮೀನು ನೀಡಿತ್ತು.