ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಘಟಿಸಿದ ಭೀಕರ ಅಗ್ನಿ ಅವಘಡದಲ್ಲಿ 26 ಮಂದಿ ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ದೆಹಲಿಯ ಮುಡ್ಕಾ ಮೆಟ್ರೋ ನಿಲ್ದಾಣದ ಬಳಿ ಇರುವ ವಾಣಿಜ್ಯ ಕಟ್ಟಡ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಹಬ್ಬಿದೆ.
40 ಮಂದಿಗೆ ಸುಟ್ಟ ಗಾಯಗಳಾಗಿದೆ.
ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಅದು ಕೆಳ ಅಂತಸ್ತಿಗೆ ಹಬ್ಬಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Extremely saddened by the loss of lives due to a tragic fire in Delhi. My thoughts are with the bereaved families. I wish the injured a speedy recovery.
— Narendra Modi (@narendramodi) May 13, 2022