ADVERTISEMENT
ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಬ್ಬಿಣ ಅದಿರಿನ ಗಣಿಗಾರಿಕೆಗೆ ಅನುಮತಿ ನಿರಾಕರಿಸಿದೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಸಂಡೂರಿನಲ್ಲಿ ಕಬ್ಬಿಣದ ಅದಿರಿನ ಗಣಿಗಾರಿಕೆಗೆ ಅನುಮತಿ ನೀಡುವ ಕಡತಕ್ಕೆ ಸಹಿ ಹಾಕಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಮುಖಭಂಗವಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಹಿಂದೆ ಗಣಿಗಾರಿಕೆ ಲೋಪದೋಷ ಮತ್ತು ಅರಣ್ಯ ಕಾನೂನು ಉಲ್ಲಂಘನೆಗಾಗಿ ಸಿಇಸಿಯು ನೀಡಿದ್ದ ನಿರ್ದೇಶನಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಕುದುರೆಮುಖ ಕಬ್ಬಿಣ ಅದಿರು ಕಂಪನಿ ವಿಫಲವಾಗಿತ್ತು.
ಈ ಹಿನ್ನೆಲೆಯಲ್ಲಿ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಬೆಟ್ಟ ಪ್ರದೇಶದಲ್ಲಿ ಅರಣ್ಯ ತಿರುವಳಿಯನ್ನು ಅನುಷ್ಠಾನಗೊಳಿಸದಂತೆ ಅಂದರೆ ಅರಣ್ಯ ತಿರುವಳಿ ಗುತ್ತಿಗೆ ಪತ್ರ ಮಾಡಿಕೊಳ್ಳದಂತೆ ಹಾಗೂ ಅರಣ್ಯಭೂಮಿಯನ್ನು ಹಸ್ತಾಂತರಿಸದಂತೆ ಅರಣ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚಿಸಿದ್ದಾರೆ.
ADVERTISEMENT