ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಹಾಗೂ ಬರಹಗಾರ ಸಾವನ್ ಕುಮಾರ್ ( Sawan Kumar) ಇಂದು ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಾವನ್ ಕುಮಾರ್(86) ಮುಂಬೈನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮುಂಬೈನ ಕೋಕಿಲಾಬೆನ್ ಧಿರೂಬಾಯಿ ಅಂಬಾನಿ ಆಸ್ಪತ್ರೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ದಾಖಲಾಗಿದ್ದರು. ಇಂದು ಆಸ್ಪತ್ರೆಯಲ್ಲಿದ್ದ ವೇಳೆ ಲಘು ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಬಿಜೆಪಿ ನಾಯಕಿ ಸೋನಾಲಿ ಪೊಗಾಟ್ ನಿಗೂಢ ಸಾವು : ಕೊಲೆ ಪ್ರಕರಣ ದಾಖಲು
ಸಾವನ್ ಕುಮಾರ್( Sawan Kumar) ಸಂಬಂಧಿ ನವೀನ್ ಕುಮಾರ್ ಸಾವಿನ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ.
ಸಾವನ್ ಕುಮಾರ್ 1972 ರಲ್ಲಿ ಗೋಮ್ತಿ ಕೆ ಕಿನಾರೆ ಚಿತ್ರ ನಿರ್ದೇಶನ ಮಾಡುವ ಮೂಲಕ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದರು.