ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿ ಇರುವಂತೆ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಅವರದ್ದೇ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ಸಹೋದರ ಡಿಕೆ ಸುರೇಶ್ ಆಘಾತ ನೀಡಿದ್ದಾರೆ.
ಇವತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮತ್ತು ಡಿಕೆಸುರೇಶ್ ಸಮ್ಮುಖದಲ್ಲಿ ಸೇರ್ಪಡೆ ಆಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಹಾಲಿ ಶಾಸಕರು. ಆದರೆ 2023ರ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಬದಲು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ನಿರೀಕ್ಷೆ ಇದ್ದು, ಚನ್ನಪಟ್ಟಣದ ಬದಲು ಅನಿತಾ ಕುಮಾರಸ್ವಾಮಿ ಶಾಸಕಿ ಆಗಿರುವ ರಾಮನಗರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಬಹುದು.
ರಾಮನಗರದಲ್ಲಿ ಡಿಕೆಸುರೇಶ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆ ಸಹೋದರರ ಇವತ್ತಿನ ಆಪರೇಷನ್ ಜೆಡಿಎಸ್ ಮಹತ್ವ ಪಡೆದಿದೆ.