ವಿಧಾನಸಭಾ ಚುನಾವಣೆ ಹತ್ತಿರವಾಗ್ತಿರುವಂತೆ ಈಗ ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕರ ಹುಟ್ಟುಹಬ್ಬದ ಆಂತರಿಕ ರಾಜಕಾರಣ ಬಿರುಸು ಪಡೆದಿದೆ.
ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರ ಹುಟ್ಟುಹಬ್ಬವನ್ನೂ ಉತ್ಸವದ ರೀತಿಯಲ್ಲಿ ಆಚರಿಸಬೇಕು ಎಂದು ಡಿಕೆಶಿ ಆಪ್ತ ಮತ್ತು ಕೆಪಿಸಿಸಿ ಮಾಧ್ಯಮ ಸಂಯೋಜಕ ಜೆ ಸಿ ರಾಜು ಅವರು ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಆಗಸ್ಟ್ 3ರಂದು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯಲಿದ್ದು, 5 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಅಮೃತ ಮಜೋತ್ಸವ-75 ರೀತಿಯಲ್ಲೇ ಡಿ.ಕೆ.ಶಿವಕುಮಾರ್ ಉತ್ಸವ-23 ಆಚರಿಸುವಂತೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಗೆ ಜೆ ಸಿ ರಾಜು ಮನವಿ ಮಾಡಿದ್ದಾರೆ.
ಸಿದ್ದರಾಮೋತ್ಸವ ಸಮಿತಿಯ ಸದಸ್ಯರೆಲ್ಲಾ ಕಾಂಗ್ರೆಸ್ ನಾಯಕರೆ ಆಗಿರುವುದರಿಂದ ಡಿ.ಕೆ.ಶಿವಮಾರ್ ಉತ್ಸವ 23 ಆಚರಿಸಲು ಮುಂದಾಗಬೇಕು. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಿರುವ ಸಾಕಷ್ಟು ಕಷ್ಟ ಅನುಭವಿಸಿದ ಡಿ.ಕೆ.ಶಿವಕುಮಾರ್ಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಯ ಸದಸ್ಯರುಗಳೇ ಡಿ.ಕೆ.ಶಿವಕುಮಾರೋತ್ಸವಕ್ಕೆ ರೂಪುರೇಷೆ ಸಿದ್ದಪಡಿಸುವಂತೆ ಮನವಿ ಮಾಡಿದ್ದಾರೆ.
ಜೆ.ಸಿ.ರಾಜು ಕೆಪಿಸಿಸಿ ಮಾಧ್ಯಮ ಸಂಯೋಜಕ ಹಾಗೂ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಹೊಣಕೆರೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ.
ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಯ ಪೂರ್ವ ಭಾವಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.