ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಆಗಸ್ಟ್ 2ನೇ ತಾರೀಕು ಮಹತ್ವದ ದಿನ. ಅವತ್ತು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ನ್ಯಾಯಾಲಯ ಡಿಕೆಶಿ ಮತ್ತು ಇತರರು ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಆದೇಶ ಹೊರಡಿಸಲಿದೆ.
ಇವತ್ತು ವಾದ-ಪ್ರತಿವಾದ ಮುಗಿದ ಬಳಿಕ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ಆಗಸ್ಟ್ 2ರಂದು ಮಧ್ಯಾಹ್ನ 3ರ ವೇಳೆ ಆದೇಶ ಹೊರಬೀಳಲಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಆಪ್ತ ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್ಪೋರ್ಟ್ ಮಾಲೀಕ ಸುನಿಲ್ ಕುಮಾರ್ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್ ವಿರುದ್ಧ ತನಿಖೆ ಆರಂಭಿಸುವಂತೆ ಜಾರಿ ನಿರ್ದೇಶನಾಲಯ ಕೋರ್ಟ್ಗೆ ಮನವಿ ಮಾಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಕೆಲ ದಿನಗಳಿಂದ ಡಿಕೆಶಿವಕುಮಾರ್ ಪದೇ ಪದೇ ಹೇಳುತ್ತಿದ್ದಾರೆ.
ADVERTISEMENT
ADVERTISEMENT