2 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿರುವ ಬಿಜೆಪಿ ಸಂಸದ ಡಾ ರಾಮ್ಶಂಕರ್ ಕಥೇರಿಯಾ ಅವರು ನಿರಾಳರಾಗಿದ್ದಾರೆ. ಕಥೇರಿಯಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಗೆ ಉತ್ತರಪ್ರದೇಶದ ಆಗ್ರಾ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಈ ತಡೆಯಾಜ್ಞೆಯಿಂದ ಮಾಜಿ ಕೇಂದ್ರ ಸಚಿವರೂ ಆಗಿರುವ ಇಟಾವಾ ಲೋಕಸಭಾ ಕ್ಷೇತ್ರದ ಸಂಸದ ಕಥೇರಿಯಾ ಅವರು ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆಯಿಂದ ಪಾರಾಗಿದ್ದಾರೆ.
ಆಗಸ್ಟ್ 5ರಂದು ಆಗ್ರಾದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕಥೇರಿಯಾ ವಿರುದ್ಧದ 12 ವರ್ಷಗಳ ಹಿಂದಿನ ದಂಗೆ ಪ್ರಕರಣದಲ್ಲಿ 2 ವರ್ಷಗಳ ಜೈಲು ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿತ್ತು.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಥೇರಿಯಾ ಅವರು ಆಗ್ರಾ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ದಂಡದ ಮೊತ್ತವನ್ನು 50 ಸಾವಿರ ರೂ.ಗಳಿಂದ 20 ಸಾವಿರ ರೂಪಾಯಿಗೆ ಕಡಿತಗೊಳಿಸಿರುವ ಜಿಲ್ಲಾ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ.
ADVERTISEMENT
ADVERTISEMENT