ಡಾ ಶಿವರಾಮ ಕಾರಂತ ಬಡಾವಣೆಗಾಗಿ ಎರಡು ವಾರದೊಳಗೆ ಟೆಂಡರ್ ಕರೆಯುವಂತೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಬಡಾವಣೆಗೆ ಜುಲೈ8ರಂದು ಅನುಮೋದನೆ ನೀಡಲಾಗಿತ್ತು.
ಬಡಾವಣೆಗಾಗಿ 286 ಎಕರೆ 15 ಗುಂಟೆ ಜಮೀನಿನ ಸ್ವಾಧೀನಕ್ಕೆ ನಾಲ್ಕು ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.