# ಜನೌಷಧಿಗಳ ಬೆಲೆಯನ್ನು 10% ಏರಿಕೆ ಮಾಡಲಾಗಿದೆ.
# ಅಡುಗೆ ಎಣ್ಣೆ ಬೆಲೆ 220 ರೂಪಾಯಿ ಆಗಿದೆ.
# ಕಬ್ಬಿಣ ಟನ್ ಗೆ 90,000 ರೂಪಾಯಿ ಆಗಿದೆ.
ಈ ರೀತಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ.
ಯು.ಪಿ.ಎ ಸರ್ಕಾರ ಗ್ಯಾಸ್ ಮೇಲೆ 50% ಸಬ್ಸಿಡಿ ನೀಡುತ್ತಿದ್ದ ಪರಿಣಾಮ ಗ್ಯಾಸ್ ಬೆಲೆ ರೂ. 414 ಮಾತ್ರ ಇತ್ತು. ಆದರೇ, narendramodi ಸರ್ಕಾರ 2020 ರಿಂದ ಸಬ್ಸಿಡಿ ನೀಡುವುದನ್ನು ನಿಲ್ಲಿಸಿದ್ದರಿಂದ ಗ್ಯಾಸ್ ಬೆಲೆ ಈಗ ಸಾವಿರದ ಗಡಿಗೆ ಬಂದು ನಿಂತಿದೆ.
ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ವಾಪಾಸು ಪಡೆದುಕೊಂಡರೂ ರಾಜ್ಯದಲ್ಲಿ ಕಾಯ್ದೆ ಏಕೆ ವಾಪಾಸು ಪಡೆದಿಲ್ಲ? ವರ್ಷಕ್ಕೆ ರೂ. 600 ಕೋಟಿ ಆದಾಯ ಗಳಿಸುತ್ತಿದ್ದ ರಾಜ್ಯದ ಎಪಿಎಂಸಿ ಗಳು ಇಂದು ಆದಾಯವಿಲ್ಲದೆ ಶಾಶ್ವತವಾಗಿ ಬಾಗಿಲು ಮುಚ್ಚಲು ಸಿದ್ಧವಾಗಿವೆ.
ದೇಶದ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಲ್ಲಿ ನೋಟು ರದ್ದತಿ, ಜಿಎಸ್ಟಿ ಜಾರಿ ಮೊದಲು 11 ಕೋಟಿ ಉದ್ಯೋಗಗಳು ಇದ್ದವು, ಈಗದು 2.5 ಕೋಟಿಗೆ ಇಳಿದಿದೆ. ದೇಶದ ನಿರುದ್ಯೋಗ ಪ್ರಮಾಣ ಹಿಂದೆಂದೂ ಕಾಣದಷ್ಟು ಏರಿಕೆಯಾಗಿದೆ.
ಇಂದು ಇಂಥಾ ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದೆ. ಆದರೇ, ರಾಜ್ಯ BJP ಸರ್ಕಾರ ತನ್ನ ಎಲ್ಲಾ ವೈಫಲ್ಯಗಳನ್ನು ಮುಚ್ಚಿ ಹಾಕಲು ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರ ನಿರ್ಬಂಧ, ಕಾಶ್ಮೀರಿ ಫೈಲ್ಸ್, ಹಲಾಲ್ ಮುಂತಾದವುಗಳ ಬಗ್ಗೆ ಮಾತ್ರ ಮಾತನಾಡುತ್ತದೆ. ಜನರ ಕಷ್ಟಗಳ ಬಗ್ಗೆ ಬಿಜೆಪಿಯದು ದಿವ್ಯಮೌನ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ