ಅಕ್ರಮ ಹಣ ವರ್ಗಾವಣೆ ಸಂಬಂಧ ತನಿಖೆ ನಡೆಸುವ ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರವಧಿ ವಿಸ್ತರಣೆಯನ್ನು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಆದರೆ ಹೊಸ ನಿರ್ದೇಶಕರ ನೇಮಕವಾಗಬೇಕಾದ ಹಿನ್ನೆಲೆಯಲ್ಲಿ ಅಧಿಕಾರ ಹಸ್ತಾಂತರಕ್ಕೆ ಅವಕಾಶ ಮಾಡಿಕೊಡುವ ಸಲುವಾಗಿ ಜುಲೈ 31ರವರೆಗೆ ಮಿಶ್ರಾಗೆ ED ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಹೇಳಿದೆ.
ಆದರೆ ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶಾನಲಯದ ನಿರ್ದೇಶಕರ ಅವಧಿಯನ್ನು ಐದು ವರ್ಷದವರೆಗೆ ವಿಸ್ತರಿಸುವ ಸಂಬಂಧ ಕೇಂದ್ರೀಯ ವಿಚಕ್ಷಣಾ ದಳ ಕಾಯ್ದೆ ಮತ್ತು ದೆಹಲಿ ಪೊಲೀಸ್ ಸ್ಥಾಪನಾ ಕಾಯ್ದೆಗೆ ಮಾಡಲಾದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಈ ಕುರಿತ ಮೇಲ್ಮನವಿಯನ್ನು ವಜಾಗೊಳಿಸಿದೆ.
2018ರ ನವೆಂಬರ್ನಲ್ಲಿ ಮೊದಲ ಬಾರಿಗೆ ಈಡಿ ನಿರ್ದೇಶಕರಾಗಿ ಮಿಶ್ರಾ ನೇಮಕವಾಗಿದ್ದರು. 2020ರಲ್ಲಿ ನಿವೃತ್ತರಾಗಬೇಕಿದ್ದ ಮಿಶ್ರಾ ಅವರಿಗೆ ಪ್ರಧಾನಿ ಮೋದಿ ಸರ್ಕಾರ ಸುಗ್ರೀವಾಜ್ಞೆ ಮೂಲಕ 2 ವರ್ಷದಿಂದ ಮೂರು ವರ್ಷಕ್ಕೆ ಅಧಿಕಾರವಧಿ ವಿಸ್ತರಿಸಿತ್ತು.
ಅಧಿಕಾರವಧಿ ವಿಸ್ತರಣೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಟಿಎಂಸಿ ನಾಯಕರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ADVERTISEMENT
ADVERTISEMENT