ಅಕ್ರಮ ಆಸ್ತಿ ಗಳಿಕೆ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.
ವಿಧಾನಸಭಾ ಚುನಾವಣೆಗೆ ಕೇವಲ 10 ತಿಂಗಳು ಬಾಕಿ ಇರುವಂತೆ ಇಡಿ ತನಿಖೆ ಚುರುಕುಗೊಂಡಿದ್ದು, ಕಾಂಗ್ರೆಸ್ಗೆ ಮತ್ತಷ್ಟು ಮುಜುಗರ ತಂದೊಡ್ಡಬಹುದು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ಗೆ ಇನ್ನಷ್ಟು ಹಿನ್ನಡೆ ಆಗಬಹುದು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿ ಅವರನ್ನು ಇಡಿ ಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿಟ್ಟಿತ್ತು.