ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎಂಟನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 4 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸಿಎಂ ಕೇಜ್ರಿವಾಲ್ಗೆ ಸೂಚಿಸಲಾಗಿದೆ.
ಫೆ.22ರಂದು ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡುವುದನ್ನು ಬಿಟ್ಟು ನ್ಯಾಯಾಲಯದ ಆದೇಶಕ್ಕಾಗಿ ಕಾಯಲಿ ಎಂದು ಎಎಪಿ ಹೇಳಿತ್ತು. ಏಳೂ ಸಮನ್ಸ್ಗಳನ್ನು ಕಾನೂನು ಬಾಹಿರ ಎಂದು ಕರೆದಿರುವ ಅರವಿಂದ್ ಕೇಜ್ರಿವಾಲ್, ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ. ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂಬ ಕೇಜ್ರಿವಾಲ್ ವಾದವನ್ನು ತಿರಸ್ಕರಿಸಿದ್ದ ಇ.ಡಿ ಏಳನೇ ಸಮನ್ಸ್ ನೀಡಿತ್ತು. ಇದೀಗ ಮತ್ತೊಮ್ಮೆ ಎಂಟನೇ ಬಾರಿಗೆ ಸಮನ್ಸ್ ನೀಡಿದೆ.