ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಆಮ್ ಆದ್ಮಿ ಪಾರ್ಟಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ.
ಸತ್ಯೇAದ್ರ ಜೈನ್ ದೆಹಲಿ ಆರೋಗ್ಯ ಸಚಿವರಾಗಿದ್ದಾರೆ.
ಬೆಂಗಳೂರಲ್ಲಿ ರೈತ ಸಮಾವೇಶದಲ್ಲಿ ಮಾತಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ `ಮೋದಿ ಸರ್ಕಾರ ಸತ್ಯೇಂದ್ರ ಜೈನ್ ಮೇಲೆ ದಾಳಿ ಮಾಡಿಸಿದ್ದರೂ ಅವರಿಗೆ ಏನೂ ಸಿಕ್ಕಿರಲಿಲ್ಲ’ ಎಂದು ಹೇಳಿದ್ದಾರೆ.
ಈ ಹಿಂದೆ ಇಡಿ ಸತ್ಯೇಂದ್ರ ಜೈನ್ ಅವರಿಗೆ ಸೇರಿದ್ದ 4.81 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿತ್ತು. 2017ಲ್ಲಿ ಸತ್ಯೇಂದ್ರ ಜೈನ್ ಮೇಲೆ ಸಿಬಿಐ ದಾಳಿ ನಡೆಸಿತ್ತು. ಕೃಷಿ ಭೂಮಿ ಖರೀದಿಸಲು ಮತ್ತು ಅದರ ಸಾಲದ ಪಾವತಿಗಾಗಿ ಅಕ್ರಮ ಹಣ ವರ್ಗಾವಣೆಯ ಆರೋಪ ಇವರ ಮೇಲಿದೆ.