ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬAಧಿಸಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದೆ.
ವಿಚಾರಣೆಗೆ ಹಾಜರಾಗುವಂತೆ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು.
2010ರಲ್ಲಿ ಯಂಗ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್ ಕಂಪನಿಯನ್ನು ಸ್ಥಾಪನೆ ಮಾಡಲಾಗಿತ್ತು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಂಪನಿಯಲ್ಲಿ ಶೇಕಡಾ 76ರಷ್ಟು ಪಾಲು ಹೊಂದಿದ್ದರೆ ಉಳಿದ ಶೇಕಡಾ 24ರಷ್ಟು ಪಾಲನ್ನು ಮೋತಿಲಾಲ್ ವೋರಾ ಮತ್ತು ಆಸ್ಕರ್ ಫನಾಂಡೀಸ್ ಹೊಂದಿದ್ದರು.
ಯAಗ್ ಇಂಡಿಯಾ ಕಂಪನಿ 1938ರಲ್ಲಿ ಜವಾಹರ್ ಲಾಲ್ ನೆಹರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಮತ್ತು ಆ ಮೂಲಕ 2 ಸಾವಿರ ಕೋಟಿ ರೂಪಾಯಿ ಆಸ್ತಿಯನ್ನು ಕೈವಶ ಮಾಡಿಕೊಳ್ಳುವ ಯತ್ನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು. ಕಾಂಗ್ರೆಸ್ ಹಿಡಿತದಲ್ಲಿರುವ ಅಸೋಷಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ನಡೆಸುತ್ತಿದ್ದ ನ್ಯಾಷನಲ್ ಹೆರಾಲ್ಡ್ ಖರೀದಿಗೆ ಯಂಗ್ ಇಂಡಿಯಾ ಎಜೆಎಲ್ನಲ್ಲಿ 90.45 ಕೋಟಿ ರೂಪಾಯಿ ಮೌಲ್ಯದ ಹಕ್ಕಿಗೆ ಪಾವತಿ ಮಾಡಿದ್ದು ಕೇವಲ 50 ಲಕ್ಷ ಎನ್ನುವುದು ಸುಬ್ರಹ್ಮಣಿಯನ್ ಸ್ವಾಮಿ ಆರೋಪ.
ಈ ಹಗರಣದ ಬಗ್ಗೆ 2014ರಲ್ಲಿ ಇಡಿ ತನಿಖೆ ಆರಂಭಿಸಿತ್ತು.