ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಜೂನ್ ೮ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಇಡಿ ತನಿಖೆ ನಡೆಸುತ್ತಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಿಮ್ಮ ಹೇಳಿಕೆ ದಾಖಲಿಸಿಕೊಳ್ಳಲು ವಿಚಾರಣೆಗೆ ಹಾಜರಾಗಿ ಎಂದು ಇಡಿ ಸೂಚಿಸಿದೆ.