ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾವುದ ಕಾಲ ಸನ್ನಿಹಿತವಾಗಿದೆ.
2024 ರ ಸಾರ್ವತ್ರಿಕ ಚುನಾವಣೆಗಳು ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ.
ಮಾಧ್ಯಮಗೋಷ್ಠಿಯ ಲೈವ್ ಟೆಲಿಕಾಸ್ಟ್ ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮಗಳಲ್ಲಿಆಗಲಿದೆ.
ಮುಂಬರುವ ಲೋಕಸಭೆ ಚುನಾವಣೆಯನ್ನು ನಿರಾತಂಕ ಹಾಗೂ ಅಚ್ಚುಕಟ್ಟಾಗಿ ನಡೆಯಸಲು ಆಯಾ ಮತದಾರ ಕ್ಷೇತ್ರವಾರು, ಜಿಲ್ಲಾವಾರು ಸರ್ಕಾರಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಯುವ ಮತದಾರರ ಹಾಗೂ ಜನಸಂಖ್ಯೆಯ, ಲಿಂಗಾನುಪಾತದ ಮಾಹಿತಿ ಪಡೆಯುವಂತೆ ಅವರು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ.
ಈಗಾಗಲೇ ರಾಜ್ಯ ಹಾಗೂ ಜಿಲ್ಲಾವಾರು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ತಿದ್ದುಪಡಿಗೂ ಸಲಹೆ ನೀಡಲಾಗಿದೆ. ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಗಿಂತ 4 ಲಕ್ಷ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಒಟ್ಟು 5.37 ಕೋಟಿ ಮತದಾರರಿದ್ದಾರೆ.