ಗುತ್ತಿಗೆದಾರರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕಾರಣ ಎನ್ನಲಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡುವುದು ಬಹುಕೇತ ಖಚಿತ ಆಗಿದೆ.
ಕೆಲವೇ ಹೊತ್ತಲ್ಲೀ ಈಶ್ವರಪ್ಪ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಈಶ್ವರಪ್ಪ ಅವರ ರಾಜೀನಾಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇಲೆ ಒತ್ತಡ ಹೇರಿದೆ. ಯಡಿಯೂರಪ್ಪ ಬಣದ ಒತ್ತಡ ಮತ್ತು ಹೈಕಮಾಂಡ್ ಸೂಚನೆ ಮೇರೆಗೆ ಇವತ್ತೇ ಈಶ್ವರಪ್ಪ ರಾಜೀನಾಮೆಯನ್ನು ಸಿಎಂ ಬೊಮ್ಮಾಯಿ ಪಡೆದುಕೊಳ್ಳುವ ಸಾಧ್ಯತೆ ಇದೆ.
ಕಳೆದ ವರ್ಷ ಮಾರ್ಚ್ನಲ್ಲಿ ಆಗಿನ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಸಂವಿಧಾನಿಕ ನಿಯಮಗಳನ್ನು ಪಾಲಿಸಿ ಎಂದು ಯಡಿಯೂರಪ್ಪಗೆ ಸೂಚಿಸಿ ಎಂದು ಆಗ್ರಹಿಸಿದ್ದರು. ಇದು ಯಡಿಯೂರಪ್ಪ ಮತ್ತು ಅವರ ಬಣದ ವಿರುದ್ಧ ಯಡಿಯೂರಪ್ಪ ವಿರೋಧಿ ಬಣಕ್ಕೆ ಅಸ್ತ್ರವಾಗಿತ್ತು.
ಈಗ ಈಶ್ವರಪ್ಪ ಅವರ ವಿರುದ್ಧವೇ ಕಮಿಷನ್ ಆರೋಪ ಮತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಣ ಈಶ್ವರಪ್ಪ ವಿರುದ್ಧ ಅಸ್ತ್ರವಾಗಿ ಬಳಸಿಕೊಂಡಿದೆ.