ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕರ್ನಾಟಕದಲ್ಲಿ ಬಿಜೆಪಿಗೆ ಆಘಾತದ ಮೇಲೆ ಆಘಾತ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಅಕ್ಟೋಬರ್ 20ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಇವತ್ತು ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಆಗಿರುವ ಪೂರ್ಣಿಮಾ ಅವರು ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರುವ ಬಗ್ಗೆ ಯೋಚನೆಗಳಾಗಿತ್ತು.
ADVERTISEMENT
ADVERTISEMENT