ADVERTISEMENT
ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕ ಮಾಡಿದ್ದಾರೆ.
ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಚುಕು ನಾಚಿ ಮತ್ತು ಚಂಡೀಗಢ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ನಂದಿತಾ ಹೂಡಾ ಅವರನ್ನು ನೇಮಿಸಲಾಗಿದೆ.
ಸೌಮ್ಯ ರೆಡ್ಡಿ ಅವರು 2018ರಲ್ಲಿ ಬೆಂಗಳೂರು ನಗರದ ಜಯನಗರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕಿಯಾಗಿದ್ದರು. ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ಕೆ ಸಿ ರಾಮಮೂರ್ತಿ ವಿರುದ್ಧ ಕೇವಲ 16 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.
ADVERTISEMENT