ADVERTISEMENT
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ಸಿಗೆ ಮಾಜಿ ಸಂಸದ ಮುದ್ದಹನುಮೇಗೌಡ ಅವರು ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮಾಜಿ ಸಂಸದರು ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಮುದ್ದಹನುಮೇಗೌಡ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ಇವರು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆ ಇದೆ.
ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸಂಸದ ಸ್ಥಾನ ಕೈತಪ್ಪಿದ್ದರಿಂದ ಕಾಂಗ್ರೆಸ್ ಬಗ್ಗೆ ಮುನಿಸಿಕೊಂಡಿದ್ದರು.
ADVERTISEMENT