ಸುಲಿಗೆ, ಬ್ಲ್ಯಾಕ್ಮೇಲ್ ಆರೋಪದ ಮೇಲೆ ‘ನ್ಯೂಸ್ 11 ಭಾರತ್’ ಖಾಸಗಿ ವಾಹಿನಿ ಮುಖ್ಯಸ್ಥ ಅರೂಪ್ ಚಟರ್ಜಿಯನ್ನು ಧನ್ಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಜೂನ್ 27ರಂದು ಉದ್ಯಮಿ ರಾಕೇಶ್ ಕುಮಾರ್ ಅವರು ಅರೂಪ್ ಚಟರ್ಜಿ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದೀಗ ಅರೂಪ್ ಚಟರ್ಜಿ ಅವರನ್ನು ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 193, 386, 387, 418, 420, 468, 469, 500, 500, 503ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕುರಿತು ತಿರುಚಿದ ವಿಡಿಯೋ ಪ್ರಸಾರ ಮಾಡಿದ ಆರೋಪದಡಿ ಝೀ ನ್ಯೂಸ್ ವಾಹಿನಿ ನಿರೂಪಕ ರೋಹಿತ್ ರಂಜನ್ ಅವರನ್ನು ಬಂಧಿಸಿದ ನೊಯ್ಡಾ ಪೊಲೀಸರು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.