ADVERTISEMENT
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಸುಪ್ರಿಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಮಧ್ಯಂತರಜಾಮೀನು ನೀಡಿದೆ. ದೆಹಲಿಯಲ್ಲಿ ಜುಬೈರ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು. ಇನ್ನು, ಈ ಪ್ರಕರಣದಲ್ಲಿ ಜುಬೈರ್ ಜೈಲಿನಲ್ಲಿದ್ದು, ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಮುಂದಿನ 5 ದಿನಗಳಲ್ಲಿ ಮತ್ತೆ ವಿಚಾರಣೆ ನಡೆಸಲಿದೆ.
2018 ರಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ ಎಂದು ಇವರ ಮೇಲೆ ಪ್ರಕರಣ ದಾಖಲಾಗಿದ್ದವು.
ತಮಗೆ ಹತ್ಯೆ ಬೆದರಿಕೆ ಇದೆ ಎಂದು ಮೊಹಮ್ಮದ್ ಜುಬೈರ್ ಸುಪ್ರಿಂ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ADVERTISEMENT