ಸರಳವಾಸ್ತು ಮೂಲಕ ರಾಜ್ಯದ ಮನೆಮನೆಗೂ ಪರಿಚಯವಾಗಿದ್ದ ಚಂದ್ರಶೇಖರ್ ಗುರೂಜಿಯವರನ್ನು ಇಂದು ಭೀಕರವಾಗಿ ಹತ್ಯೆಮಾಡಲಾಗಿದೆ.
ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನ ರಿಸೆಪ್ಶನ್ ಬಳಿ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ಹತ್ಯೆ ದೃಶ್ಯಗಳು ದಾಖಲಾಗಿವೆ. ಆವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
‘ಸರಳ ವಾಸ್ತು’ ಹೆಸರಿನಲ್ಲಿ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಇವರು ರಾಜ್ಯದಲ್ಲಿ ಮನೆಮಾತಾಗಿದ್ದರು. ಇವರು ಸರಳ ವಾಸ್ತು ಸಲಹೆ ಬಗ್ಗೆ ಹಲವು ಪುಸ್ತಕ ಬರೆದಿದ್ದಾರೆ. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್ಗಳಲ್ಲಿ ಮಾತನಾಡಿರುವ ಚಂದ್ರಶೇಖರ್, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.
ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಬೂರಾಮ್ ಭೇಟಿ ನೀಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಆಗಮಿಸಿರುವ ಶ್ವಾನದಳ ಪರಿಶೀಲನೆ ನಡೆಸುತ್ತಿದೆ.