ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ.
ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಾದ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ಇಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ ಬಳಿ ವ್ಯಕ್ತಿಯೋರ್ವನ ಮೇಲೆ ನಾಲ್ವರ ತಂಡ ತಲವಾರು ದಾಳಿ ಮಾಡಿ ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುರತ್ಕಲ್ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ.