ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ ಕೆ ವಿಜಯ್ಕುಮಾರ್ ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆ ಕಲಂ 504 ಮತ್ತು 153ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ಧ ಎಂದು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಜಾತಿ-ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.
ADVERTISEMENT