ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿಯಲ್ಲಿ ಬಿಜೆಪಿ IT ಸೆಲ್ನ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಐಪಿಸಿ ಕಲಂ 120ಬಿ, 153ಎ, 505(2), 34ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಕಾಂಗ್ರೆಸ್ ಪ್ರದೇಶ ಸಮಿತಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ಅವರು ದೂರು ಸಲ್ಲಿಸಿದ್ದರು. ದೂರು ಸಲ್ಲಿಕೆ ವೇಳೆ ವೇಳೆ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದ್ದರು.
ಟ್ವಿಟ್ಟರ್ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಅಮಿತ್ ಮಾಳವಿಯಾ ಆ ಮೂಲಕ ಸಮಾಜವನ್ನು ಪ್ರಚೋದಿಸುವ ಹಾಗೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ನ ಹಿರಿಯ ನಾಯಕರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಎಫ್ಐಆರ್ ದಾಖಲಿಸಲಾಗಿದೆ.
ADVERTISEMENT
ADVERTISEMENT