ADVERTISEMENT
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಗಣಿ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುವ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಮೊದಲನೇ ಆರೋಪಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷರೂ ಆಗಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಎರಡನೇ ಆರೋಪಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಚಿಕ್ಕನಾಯಕನಹಳ್ಳಿಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಬಾಬು ಮೂರನೇ ಆರೋಪಿಯಾಗಿದ್ದಾರೆ.
2006ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ವೇಳೆ ಬೋಗಸ್ ಕಂಪನಿ ಆಗಿರುವ ಶ್ರೀಸಾಯಿ ಮಿನರಲ್ಸ್ಗೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಣಿಕಾರಿಕೆಗೆ ಗುತ್ತಿಗೆ ನೀಡಿದ್ದರ ಸಂಬAಧ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಸ್ಐಟಿ ತನಿಖೆ ನಡೆಸಿದೆ. ಈ ಹಗರಣಕ್ಕೆ ಸಂಬAಧಿಸಿದAತೆ ಲೋಕಾಯುಕ್ತ ಎಸ್ಐಟಿ ಅಂತಿಮ ಆರೋಪಪಟ್ಟಿ ಸಿದ್ಧಪಡಿಸಿದ್ದು, ನ್ಯಾಯಾಲಯಕ್ಕೆ ಅಂತಿಮ ಆರೋಪಪಟ್ಟಿ ಸಲ್ಲಿಕೆಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅನುಮತಿಗಾಗಿ ಪತ್ರವನ್ನು ಬರೆದಿದ್ದು, ಅನುಮತಿ ಇನ್ನೂ ಬಾಕಿ ಇದೆ.
ಲೋಕಾಯುಕ್ತ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು ಐಪಿಎಸ್ ಚಂದ್ರಶೇಖರ್ ವಿರುದ್ಧ ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿದ್ದಲ್ಲದೇ, ಐಪಿಎಸ್ ಚಂದ್ರಶೇಖರ್ ಅವರ ಕೇಡರ್ನ್ನೇ ಬದಲಾಯಿಸುತ್ತೇನೆ ಎಂದು ಬಹಿರಂಗ ಬೆದರಿಕೆಯನ್ನೂ ಹಾಕಿದ್ದರು.
ಈ ಹಿನ್ನೆಲೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಸಾರ್ವಜನಿಕ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಸಂಬAಧ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಸಂಜಯನಗರ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಆದರೆ ಬೆಂಗಳೂರಿನ 42ನೇ ಎಸಿಎಂಎA ನ್ಯಾಯಾಲಯದ ಆದೇಶದಂತೆ ಈಗ ಎಫ್ಐಆರ್ ದಾಖಲಾಗಿದೆ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆ 224ರಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ತಿಂಗಳಷ್ಟೇ ಗಣಿ ಹಗರಣದಲ್ಲಿ ಆರೋಪಿಯಾಗಿರುವ ಕುಮಾರಸ್ವಾಮಿಗೆ ಮಂಜೂರು ಮಾಡಲಾಗಿದ್ದ ಜಾಮೀನು ರದ್ದುಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ADVERTISEMENT