ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ರೈಲಿನ ಮೂರನೇ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ರೈಲು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ. ಬೋಗಿಯಿಂದ ಕೆಳಗಿಳಿಯುವ ವೇಳೆ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಕ್ಷಣವೇ ರೈಲ್ವೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ.