ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ, ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ದೆಹಲಿ ಸರ್ಕಾರ ನಿಷೇಧ (Firecrackers Ban) ಹೇರಿದೆ.
ಜನವರಿ 1ರವರೆಗೆ ಆನ್ಲೈನ್ ಪಟಾಕಿ ಮಾರಾಟ, ವಿತರಣೆ ಮೇಲೆ ನಿಷೇಧ ಹೇರಲಾಗಿದ್ದು, ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವುದರ ಹೊರತಾಗಿ ಮುಂದಿನ ವರ್ಷ ಜನವರಿ 1 ರವರೆಗೆ ಆನ್ಲೈನ್ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ದೆಹಲಿಯಲ್ಲಿ ನಿಷೇಧಿಸಲಾಗಿದೆ (Firecrackers Ban). ಇದನ್ನೂ ಓದಿ : Ganeshotsava : ಮಾಂಸ ಮಾರಾಟ ಬಂದ್
ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ. ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸ್,ಡಿಪಿಸಿಸಿ ಮತ್ತು ಕಂದಾಯ ಇಲಾಖೆಯೊಂದಿಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಕೂಡ ತಿಳಿಸಿದರು. ಇದನ್ನೂ ಓದಿ : ಪಬ್ಜಿ ಸಂಬಂಧಿತ BGMI ಗೇಮ್ ನಿಷೇಧಿಸಿದ ಭಾರತ ಸರ್ಕಾರ