ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.