ADVERTISEMENT
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಸೇನಾಧಿಕಾರಿಯೂ ಒಳಗೊಂಡಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ದೋಡಾ ಜಿಲ್ಲೆಯ ದೆಸಾದಲ್ಲಿ ಧಾರಿ ಗೋಟೆ ಉರರ್ಭಾಗಿ ದಟ್ಟಾರಣ್ಯದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ಕೈಗೊಂಡಿದ್ದರು.
ಸೋಮವಾರ ರಾತ್ರಿ 9 ಗಂಟೆಯ ವೇಳೆ ಉಗ್ರರ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಐವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜುಲೈ 9ರಂದು ಕಥ್ವಾ ಜಿಲ್ಲೆಯಲ್ಲಿ ಸೈನಿಕರು ಪ್ರಯಾಣಿಸ್ತಿದ್ದ ಟ್ರಕ್ನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆಗ ನಡೆದಿದ್ದ ಗುಂಡಿನ ಕಾಳಗದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದರು.
1 ವಾರದ ಅವಧಿಯಲ್ಲಿ ಭಾರತೀಯ ಸೇನೆ ಉಗ್ರರ ದಾಳಿಯಲ್ಲಿ 9 ಮಂದಿ ಸೈನಿಕರನ್ನು ಕಳೆದುಕೊಂಡಿದೆ.
ADVERTISEMENT