ಜೂನ್ 11ರಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿ ಆಗಲಿದೆ.
ಈ ಸಂಬಂಧ ಸಾರಿಗೆ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಗುರುತಿನ ಚೀಟಿ ಕಡ್ಡಾಯ:
ಜೂನ್ 11ರಿಂದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರು ತಮ್ಮ ವಾಸ ಸ್ಥಳದ ದೃಢೀಕರಣಕ್ಕಾಗಿ ಭಾವಚಿತ್ರ ಇರುವ ಗುರುತಿನ ಚೀಟಿ ತೋರಿಸುವುದು ಕಡ್ಡಾಯ.
ಆಧಾರ್ ಅಥವಾ ವೋಟರ್ ಐಡಿ ಕಾರ್ಡ್ನ್ನು ತೋರಿಸುವ ಮೂಲಕ ಶೂನ್ಯ ಟಿಕೆಟ್ನ್ನು ಪಡೆಯಬೇಕಾಗುತ್ತದೆ.
ಶಕ್ತಿ ಸ್ಮಾರ್ಟ್ ಕಾರ್ಡ್:
ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ ಸೆಪ್ಟೆಂಬರ್ 11ರೊಳಗಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ನ್ನು ಪಡೆದುಕೊಳ್ಳಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್ ಸಿಕ್ಕ ಬಳಿಕ ಅದನ್ನೇ ಗುರುತಿನ ಚೀಟಿಯಾಗಿ ತೋರಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು.
ಈ ಬಸ್ಗಳಲ್ಲಿ ಉಚಿತ ಪ್ರಯಾಣ ಇಲ್ಲ:
ಐಷಾರಾಮಿ ಬಸ್ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್,, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್ , ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
ಪುರುಷರಿಗೆ ಶೇಕಡಾ 50ರಷ್ಟು ಮೀಸಲು:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳನ್ನು ಹೊರತುಪಡಿಸಿ ಕೆಎಸ್ಆರ್ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್ಗಳಲ್ಲಿ (AC ಮತ್ತು ಅಂತಾರಅಜ್ಯ ಬಸ್ಗಳನ್ನು ಹೊರತುಪಡಿಸಿ) ಪುರುಷರಿಗೆ ಶೇಕಡಾ 50ರಷ್ಟು ಆಸನವನ್ನು ಮೀಸಲಿಡಲಾಗುವುದು.
ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ:
ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.
ಮೂರು ತಿಂಗಳಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆ:
ಸೇವಾ ಸಿಂಧು ಮೂಲಕ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ.
ವಾಸದ ವಿಳಾಸದ ದಾಖಲೆ ತೋರಿಸುವುದು ಕಡ್ಡಾಯ:
ಶಕ್ತಿ ಸ್ಮಾರ್ಟ್ ಕಾರ್ಡ್ ಸಿಗುವವರೆಗೆ ಬಸ್ನಲ್ಲಿ ಪ್ರಯಾಣದ ವೇಳೆ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಪಡೆದಿರುವ ಭಾವಚಿತ್ರ ಇರುವ ಮತ್ತು ವಾಸದ ವಿಳಾಸ ಇರುವ ಗುರುತಿನ ಚೀಟಿಯನ್ನು ತೋರಿಸಿ ಶೂನ್ಯ ಟಿಕೆಟ್ ಪಡೆದುಕೊಳ್ಳಬೇಕು.
ADVERTISEMENT
ADVERTISEMENT