ADVERTISEMENT
ಮನೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ನ ಲಾಭ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
200 ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವವರು ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ.
ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ADVERTISEMENT