ಚಿಕನ್ ಊಟದ ವಿಚಾರವಾಗಿ ಗಂಡ-ಹೆಂಡತಿ ಮಧ್ಯೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿ ಕೋಡು ಗ್ರಾಮದಲ್ಲಿ ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳವಾಗಿ ತಾರಕಕ್ಕೇ ಏರಿ ತನ್ನ ಹೆಂಡತಿಯನ್ನು ಪತಿಯೇ ಚಾಕುವಿನಿಂದ ಹಿರಿದುಕೊಲೆ ಮಾಡಿದ್ದಾನೆ.
ಶೀಲಾ ಕೊಲೆಯಾದ ಪತ್ನಿ. ಕೆಂಚಪ್ಪ ಹಾಗೂ ಶೀಲಾ 9 ವರ್ಷಗಳ ಹಿಂದೆ ಮನೆಯವರ ವಿರೋಧದ ನಡುವೆ ಪ್ರೀತಿಸಿ ಓಡಿಹೋಗಿ ಮದುವೆಯಾಗಿದ್ದರು. ಈ ದಂಪತಿಗೆ ಒಂದು ಮುದ್ದಾದ ಮಗು ಎತ್ತಿದ್ದರು.
ಈ ನಡುವೆ ಕೆಂಚಪ್ಪ ತನ್ನ ಮೊದಲ ಪತ್ನಿಗೆ ಮಗುವಾಗದ ಹಿನ್ನೆಲೆಯಲ್ಲಿ ತನ್ನ ಮದುವೆಯಾಗಿದ್ದ ಎನ್ನುವ ವಿಷಯ ಪತ್ನಿ ಶೀಲಾಗೆ ತಿಳಿದು ಹೋಗಿತ್ತು. ಇದರಿಂದ ಮನಡಯಲ್ಲಿ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು. ಎರಡೂ ಕಡೆಯವರು ಇಬ್ಬರನ್ನು ರಾಜಿ ಮಾಡಿದ್ದರು. ಆದರೆ ಕಳೆದ ರಾತ್ರಿ ಮದ್ಯ ಸೇವನೆ ಮಾಡಿ ಬಂದಿದ್ದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
ಒಂದು ಮಗು ಆಗುವವರೆಗೂ ಚೆನ್ನಾಗಿದ್ದ ಕೆಂಚಪ್ಪ ನಂತರ ನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಶೀಲಾಳ ಬಗ್ಗೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ. ಇದರಿಂದ ಶೀಲಾ ತನ್ನ 4 ವರ್ಷದ ಮಗಳನ್ನು ವಾಸನದಲ್ಲಿರುವ ತಾಯಿ ಮನೆಯಲ್ಲಿಯೇ ಬಿಟ್ಟಿದ್ದಳು, ಅಲ್ಲದೇ ಕಳೆದ ಜೂನ್ 7ರಂದು ಮಗಳ ಹುಟ್ಟುಹಬ್ಬವನ್ನು ತವರು ಮನೆಯಲ್ಲಿಯೇ ಮಾಡಿ ಬನ್ನಿಕೋಡ್ ಗೆ ಬಂದಿದ್ದರು. ಹುಟ್ಟು ಹಬ್ಬಕ್ಕೂ ಕೂಡ ಕೆಂಚಪ್ಪ ಹೋಗಿರಲಿಲ್ಲ. ತವರಿನಿಂದ ವಾಪಸ್ಸು ಬಂದ ನಂತರ ಮತ್ತೆ ಜಗಳವಾಡಿದ್ದ, ಅಲ್ಲದೇ ಸಂಜೆ ಬರುವುದರೊಳಗೆ ಚಿಕನ್ ಮಾಡು ಎಂದು ಹೇಳಿ ಹೋಗಿದ್ದಾನೆ. ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಶೀಲಾಳ ಜೊತೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದೀಗ ಈ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.