ಪೆಟ್ರೋಲ್, ಡೀಸೆಲ್ ಬೆಲೆಗಳು ಶರವೇಗದಲ್ಲಿ ಏರಿಕೆ ಆಗುತ್ತಲೇ ಇದೆ. ಸೋಮವಾರ ತೈಲ ಕಂಪನಿಗಳು ದರ ಹೆಚ್ಚಳ ಮಾಡಿವೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 40 ಪೈಸೆ ಏರಿಕೆ ಮಾಡಲಾಗಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ Rs 109.39ಆಗಿದ್ದರೆ, ಡೀಸೆಲ್ ಬೆಲೆ Rs 94.23 ರೂಪಾಯಿ ಆಗಿದೆ.
ನಾಳೆ ಹೊತ್ತಿಗೆ ಪೆಟ್ರೋಲ್ ದರ ಮತ್ತೆ 110 ರೂಪಾಯಿ ದಾಟುವುದು ಹೆಚ್ಚು ಕಡಿಮೆ ನಿಶ್ಚಿತವಾಗಿದೆ.
ಈ 14 ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 8.40 ರೂಪಾಯಿ ಹೆಚ್ಚಾಗಿದೆ.