ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ಸಿ ಬಿ ಸುರೇಶ್ಬಾಬು ಅವರನ್ನು ನೇಮಕ ಮಾಡಲಾಗಿದೆ.
ಈ ಮೂಲಕ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡಗೆ ಶಾಕ್ ನೀಡಿದ್ದಾರೆ.
ಮಂಡ್ಯ ಲೋಕಸಭಾ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕುಮಾರಸ್ಬಾಮಿ ಅವರು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದರು.
ಜುಲೈ 14ರಂದು ಸ್ಪೀಕರ್ ಯು ಟಿ ಖಾದರ್ ಅವರಿಗೆ ಕೊಟ್ಟಿರುವ ಪತ್ರದಲ್ಲಿ ವಿಧಾನಸಭೆಯಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಬಿ ಸುರೇಶ್ ಬಾಬು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾನ್ಯ ಮಾಡುವಂತೆ ಮನವಿ ಮಾಡಿದ್ದರು.
ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕುಮಾರಸ್ವಾಮಿ ಅವರು ಕೊಟ್ಟಿರುವ ಪತ್ರವನ್ನು ಸ್ಪೀಕರ್ ಖಾದರ್ ಅವರು ವಿಧಾನಸಭೆಯಲ್ಲಿ ಓದಿ ಹೇಳುವ ಮೂಲಕ ಗಮನಕ್ಕೆ ತಂದರು.
ADVERTISEMENT
ADVERTISEMENT