ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸನ್ಯಾಸ ಸ್ವೀಕರಿಸಿದ್ದಾರೆ. ತಮ್ಮನ್ನು ಪಕ್ಷದ ಹೊಣೆಗಾರಿಕೆಯಿಂದ ಮುಕ್ತರನ್ನಾಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಲ್ಲಿ ಮನವಿ ಮಾಡಿಕೊಂಡಿರುವ ಗೌತಮ್ ಗಂಭೀರ್ , ಮುಂದಿನ ದಿನಗಳಲ್ಲಿ ಕ್ರಿಕೆಟ್ ನಲ್ಲಿ ತಮ್ಮ ಭವಿಷ್ಯ ಕಂಡುಕೊಳ್ಳುವುದಾಗಿ ನುಡಿದಿದ್ದಾರೆ.
I sincerely thank Hon’ble PM @narendramodi ji and Hon’ble HM @AmitShah ji for giving me the opportunity to serve the people. Jai Hind!,” said Gautam Gambhir on ‘X’.— GautamGambhir (@GautamGambhir)
ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಗೌತಮ್ ಗಂಭೀರ್ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ರಾಜಕೀಯ ಸನ್ಯಾಸವನ್ನು ಖಚಿತಪಡಿಸಿದ್ದಾರೆ. ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.