ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ.
ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ.
ಕವಿತಾ ಮತ್ತು ಪತಿ ಗಿರೀಶ್ ಹಾಗೂ ಪುತ್ರಿ ಮೂವರೂ ಯಾತ್ರಾಸ್ಥಳ ಸಂಗಮ ಕ್ಷೇತ್ರಕ್ಕೆ ಪೂಜೆ ಸಲ್ಲಿಸಲು ಬಂದಿದ್ದ ವೇಳೆ ದೇವಾಲಯದ ಪ್ರವೇಶಕ್ಕೂ ಮುನ್ನ ಶ್ರೀಕ್ಷೇತ್ರ ಸಂಗಮದ ಮುಂಭಾಗದಲ್ಲೇ ಕಪಿಲಾ ನದಿ ದಡದಲ್ಲಿ ಕಾಲು ತೊಳೆಯಲು ತೆರಳಿದ್ದಾರೆ. ಈ ವೇಳೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಆಗ ಕವಿತಾ ಕಾಲು ಜಾರಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.