ಗೋವಾದಲ್ಲಿ 5 ಜನ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ನಿಂದ ಸಂಪರ್ಕ ಕಡಿದುಕೊಂಡಿದ್ದಾರೆ. ಈ ಬೆನ್ನಲ್ಲೇ, ಮಿಚೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕ ಸ್ಥಾನದಿಂದ ವಜಾಗೊಳಿಸಿತ್ತು.
ಇದೀಗ ಕಾಂಗ್ರೆಸ್ ಶಾಸಕ ಮಿಚೆಲ್ ಲೋಬೋ ಹಾಗೂ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ಗೋವಾ ವಿಧಾನಸಭಾ ಸ್ಪೀಕರ್ಗೆ ಅರ್ಜಿ ಸಲ್ಲಿಸಿದೆ.
2022 ರ ಮಾರ್ಚ್ ನಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ 11 ಶಾಸಕರಲ್ಲಿ ಇದೀಗ, 5 ಜನ ಶಾಸಕರು ಕಾಂಗ್ರೆಸ್ನಿಂದ ಸಂಪರ್ಕ ಕಡಿದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಭಾನುವಾರವಷ್ಟೇ, ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಮಿಚೆಲ್ ಲೋಬೋ ಹಾಗೂ ದಿಗಂಬರ್ ಕಾಮತ್ ಅವರ ವಿರುದ್ಧ ಆರೋಪ ಮಾಡಿತ್ತು. ಅಲ್ಲದೇ, ಮಿಚೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕತ್ವ ಸ್ಥಾನದಿಂದ ಕೆಳಗಿಳಿಸಿತ್ತು.
2022 ರ ಮಾರ್ಚ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿಯ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.