ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದೇ ವಾರದಲ್ಲಿ ದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ.
ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಸರಕು ಸಾಗಾಣಿಕೆ ರೈಲು ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದಾರೆ. 25 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಗೂಡ್ಸ್ ರೈಲಿನ ಚಾಲಕ ಮತ್ತು ಮೋಟಾರ್ಮ್ಯಾನ್ ಕೂಡಾ ಸೇರಿದ್ದಾರೆ.
ಅಸ್ಸಾಂನ ಸಿಲ್ಚಾರ್ನಿಂದ ಪಶ್ಚಿಮ ಬಂಗಾಳದ ಸೀಲ್ದಾಗೆ ಎಕ್ಸ್ಪ್ರೆಸ್ ರೈಲು ಪ್ರಯಾಣಿಸ್ತಿತ್ತು. ರಂಗಪಾನಿ ರೈಲ್ವೆ ಸ್ಟೇಷನ್ನಲ್ಲಿ ಗೂಡ್ಸ್ ರೈಲು ಹಿಂಬದಿಯಿಂದ ಎಕ್ಸ್ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅತ್ಯಂತ ಬ್ಯುಸಿ ಇರುವ ಈ ಮಾರ್ಗದಲ್ಲಿ ಗೂಡ್ಸ್ ರೈಲು ಸಿಗ್ನಲ್ ತಪ್ಪಿದೆ ಅಪಘಾತ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಸಿಕ್ಕಿದೆ.
ಎಕ್ಸ್ಪ್ರೆಸ್ ರೈಲಿನ ಹಿಂಭಾಗದಲ್ಲಿ ಕಾರ್ಗೋ ವ್ಯಾನ್ ಬೋಗಿ ಮತ್ತು ಗಾರ್ಡ್ಸ್ ಬೋಗಿ ಇದ್ದಿದ್ದರಿಂದ ಭಾರೀ ಜೀವಹಾನಿ ಆಗುವುದು ತಪ್ಪಿದೆ.
ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ADVERTISEMENT
ADVERTISEMENT