ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ವಿಡಿಯೋ ಚಿತ್ರೀಕರಣ ಮಾಡದಂತೆ ಮತ್ತು ಫೋಟೋ ತೆಗೆಯದಂತೆ ನಿಷೇಧ ಹೇರಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಸರ್ಕಾರದ ಆದೇಶಕ್ಕೆ ಸಾರ್ವಜನಿಕ ಟೀಕೆ ಟಿಪ್ಪಣಿಗಳು ಕೇಳಿ ಬಂದ ಹಿನ್ನೆಲೆ ಆದೇಶ ಹೊರಬಿದ್ದ 24 ಗಂಟೆಯಲ್ಲೇ ಈ ಹಿಂದಿನ ಆದೇಶವನ್ನು ರದ್ದುಪಡಿಸಿ ಹೊಸ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.
ವಿಡಿಯೋ ಮತ್ತು ಫೋಟೋ ನಿಷೇಧದಿಂದ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂಬ ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಸರ್ಕಾರ ಈ ಹಿಂದಿನ ಆದೇಶವನ್ನು ವಾಪಸ್ ಪಡೆದಿದೆ.