ADVERTISEMENT
BJP ಶಾಸಕ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಸರು ಬರೆದಿಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಎಸ್ಡಿಎ ನೌಕರರಾಗಿದ್ದ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಮರಣಪತ್ರದಲ್ಲಿ ಶಾಸಕ ಎಂ ಚಂದ್ರಪ್ಪ ಮತ್ತು ತಾಲೂಕು ಪಂಚಾಯತ್ ಇಒ ರವಿಕುಮಾರ್ ತಮಗೆ ಕಿರುಕುಳ ಕೊಡುತ್ತಿದ್ದರು, ಅಮಾನತು ಮಾಡಿಸುವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.
ಉಪ್ಪರಿಗೇನಹಳ್ಳಿಯ ಮೋಹನ್ಕುಮಾರ್, ಮೂರ್ತಿ, ಉಗ್ರಪ್ಪ, ರಾಜಪ್ಪ ಮತ್ತು 30 ಜನರ ಸ್ನೇಹಿತರು ತಮ್ಮನ್ನು ಬೆದರಿಸಿ ಖಾತೆ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಎಸ್ಸಿಗಳಿಗೆ ಮಾತ್ರ ಕೆಲಸ ಮಾಡಿಕೊಂಡು ಎಂದು ಪಿಡಿಒ ಮೂಲಕ ಇಒ ರವಿಕುಮಾರ್ ಹಿಂಸೆ ಮಾಡ್ತಿದ್ದಾರೆ ಎಂದು ಮರಣಪತ್ರದಲ್ಲಿ ಆರೋಪಿಸಿದ್ದಾರೆ.
ತಾಲೂಕು ಪಂಚಾಯತ್ ಇಒ ಮೇಲೆ ತನಿಖೆಯಾಗ್ಬೇಕು ಮತ್ತು ಲಿಂಗಾಯತರು ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಮರಣಪತ್ರದಲ್ಲಿ ಆಗ್ರಹಿಸಿದ್ದಾರೆ.
ಆತ್ಮಹತ್ಯೆ ಸಂಬಂಧ ಹೊಸದುರ್ಗ ಠಾಣೆಯಲ್ಲಿ FIR ದಾಖಲಾಗಿದೆ.
ADVERTISEMENT