ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಇಚ್ಚಿಸುವವರಿಗೆ ಸಿಹಿ ಸುದ್ದಿ.. ಗೃಹಲಕ್ಷ್ಮಿ ಯೋಜನೆಗಾಗಿ ನಾಳೆಯಿಂದಲೇ ನೀವು ಅರ್ಜಿ ಸಲ್ಲಿಸಬಹುದಾಗಿದೆ.
ಸೇವಾ ಸಿಂಧು ಪೋರ್ಟಲ್ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬೇಕು. ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಕಾರ್ಯ ಸಂಪೂರ್ಣ ಉಚಿತವಾಗಿದೆ. ಅರ್ಜಿ ಸಲ್ಲಿಸುವವರು ಆಧಾರ್ ಕಾರ್ಡ್ ನಂಬರ್, ಬ್ಯಾಂಕ್ ಖಾತೆ, ಪಡಿತರ ಚೀಟಿಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಅರ್ಜಿ ತುಂಬುವಾಗ ಯಾವುದಾದರೂ ಅನುಮಾನಗಳು ಉದ್ಭವ ಆದಲ್ಲಿ, ಇದನ್ನು ಬಗೆಹರಿಸಿಕೊಳ್ಳಲು ಸರ್ಕಾರ ಆರಂಭಿಸಿರುವ ಗೃಹಲಕ್ಷ್ಮಿ ಸಹಾಯವಾಣಿ 1902ಕ್ಕೆ ಕರೆ ಮಾಡಬಹುದಾಗಿದೆ.
ಕೆಲವೆಡೆ ಮನೆ ಮನೆಗೂ ತೆರಳಿ ಅರ್ಜಿಗಳನ್ನು ತೆಗೆದುಕೊಳ್ಳುವ ಕಾರ್ಯ ನಡೆಯಲಿದೆ.
ಈ ಯೋಜನೆಯ ಲಾಭವನ್ನು 1.28 ಕೋಟಿ ಕುಟುಂಬಗಳು ಪಡೆಯಲಿವೆ. ಆಗಸ್ಟ್ 15ರ ನಂತರ ಈ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ಸಿಗಲಿದೆ.
ADVERTISEMENT
ADVERTISEMENT