ಜೂನ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಜೂನ್ 26ರಂದು ಸಂಪುಟ ಸಭೆ ನಡೆಯಲಿದೆ. ಜೂನ್ 27ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಆಗಸ್ಟ್ 16 ಅಥವಾ 17ರಂದು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಅರ್ಜಿ ಸಲ್ಲಿಕೆ ವೇಳೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಆಧಾರ್ ಜೋಡಣೆಯ ವೇಳೆಯೇ ಅರ್ಜಿದಾರರು ತೆರಿಗೆಪಾವತಿದಾರರೇ ಅಥವಾ ಜಿಎಸ್ಟಿ ಪಾವತಿದಾರರೇ ಎನ್ನುವುದು ತಿಳಿಯಲಿದೆ. ಆ ರೀತಿಯಲ್ಲಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದೇವೆ ಎಂದು ಸಚಿವರು ಹೇಳಿದ್ದಾರೆ.
ಒಂದು ವೇಳೆ ಜಿಎಸ್ಟಿ ಅಥವಾ ಆದಾಯ ತೆರಿಗೆ ಪಾವತಿ ಸಲ್ಲಿಕೆ ಮಾಡಿದರೆ ಅಂಥವರಿಗೆ ಅರ್ಜಿ ಸಲ್ಲಿಕೆ ವೇಳೆ ಸ್ವೀಕೃತಿ ಪತ್ರ ಸಿಗಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ADVERTISEMENT
ADVERTISEMENT